ಕೊಯಿಮತ್ತೂರು: ತಮಿಳುನಾಡಿನ ಕೊಯಿಮತ್ತೂರಿನ ಗ್ರಾಮವೊಂದರಲ್ಲಿ ಕಾಣಿಸಿಕೊಂಡಿದ್ದ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಗ್ರಾಮಕ್ಕೆ ಲಗ್ಗೆ ಹಾಕಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ... ವಿಡಿಯೋ
ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು, ಅದರ ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
King Cobra rescued in coimbatore
ನರಸಿಂಪುರಂ ಗ್ರಾಮದಲ್ಲಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿತು. ಇದರ ರಕ್ಷಣೆ ಮಾಡಿರುವ ಸಿಬ್ಬಂದಿ ತದನಂತರ ಸಿರುವಾಣಿ ಅರಣ್ಯದಲ್ಲಿ ಬಿಟ್ಟು ಬಂದಿದ್ದಾರೆ. ಈ ಪ್ರದೇಶದಲ್ಲಿ ಮೇಲಿಂದ ಮೇಲೆ ಹಾವು, ಕಾಳಿಂಗ ಸರ್ಪ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಇದೇ ಗ್ರಾಮದ ಮನೆವೊಂದರ ಬಾತ್ರೂಮ್ನಲ್ಲಿ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿತು. ಅದರ ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿತ್ತು ಎಂದು ತಿಳಿದು ಬಂದಿದೆ.