ಮುಜಾಫರ್ನಗರ(ಯುಪಿ): ಉತ್ತರಪ್ರದೇಶದ ಮುಜಾಫರ್ನಗರದಲ್ಲಿ 15 ವರ್ಷದ ಅಪ್ರಾಪ್ತೆ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
15 ವರ್ಷದ ಅಪ್ರಾಪ್ತೆ ಮೇಲೆ ಕಾಮುಕನಿಂದ ರೇಪ್... ಪ್ರಕರಣ ದಾಖಲು - ಅಪ್ರಾಪ್ತೆ ಮೇಲೆ ಅತ್ಯಾಚಾರ
ಉತ್ತರಪ್ರದೇಶದ ಮುಜಾಫರ್ನಗದಲ್ಲಿನ ಹಳ್ಳಿವೊಂದರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಬಾಲಕಿ ಮನೆಯಲ್ಲಿ ಯಾರು ಇಲ್ಲದ ವೇಳೆ ಆಕೆಯ ಅಪಹರಣ ಮಾಡಿರುವ ನೆರೆ ಮನೆಯ ವ್ಯಕ್ತಿ ತನ್ನ ಮನೆಗೆ ಕರೆದುಕೊಂಡು ಹೋಗಿ ದುಷ್ಕೃತ್ಯವೆಸಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ಪ್ರಕರಣ ದಾಖಲು ಮಾಡಿದ್ದು, ಅರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಯಾರಿಗೂ ಮಾಹಿತಿ ನೀಡದಂತೆ ಬೆದರಿಕೆ ಹಾಕಿರುವ ವ್ಯಕ್ತಿ, ಕೊಲೆ ಮಾಡುವ ಬೆದರಿಕೆ ಸಹ ಹಾಕಿದ್ದಾನೆ. ಮನೆಗೆ ತೆರಳಿರುವ ಬಾಲಕಿ ಪೊಲೀಕರ ಮುಂದೆ ಮಾಹಿತಿ ನೀಡಿದ್ದಾಳೆ. ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲಾಗಿದ್ದು, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.