ನವದೆಹಲಿ:16 ವರ್ಷದ ಟಿಕ್ ಟಾಕ್ ಸ್ಟಾರ್ ಹಾಗೂ ಡ್ಯಾನ್ಸರ್ ಸಿಯಾ ಕಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
16 ವರ್ಷದ ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ... ಕಾರಣ ನಿಗೂಢ! - 16 ವರ್ಷದ ಟಿಕ್ ಟಾಕ್ ಸ್ಟಾರ್
ಕೇವಲ 16 ವರ್ಷಕ್ಕೆ ಟಿಕ್ ಟಾಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ನವದೆಹಲಿಯ ಪ್ರೀತ್ ವಿಹಾರ್ನಲ್ಲಿ ವಾಸವಾಗಿದ್ದ ಸಿಯಾ, ಟಿಕ್ ಟಾಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದರು. ವಿಭಿನ್ನವಾಗಿ ಡ್ಯಾನ್ಸ್ ಮಾಡುವ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದನೆ ಮಾಡಿದ್ದ ಸಿಯಾ, ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿನ್ನೆ ಸಂಜೆ ಮ್ಯಾನೇಜರ್ ಅರ್ಜುನ್ ಸರಿನ್ ಜೊತೆ ಹಾಡಿನ ಬಗ್ಗೆ ಚರ್ಚೆ ನಡೆಸಿದ್ದಳಂತೆ. ಈ ವೇಳೆ ಆಕೆ ಚೆನ್ನಾಗಿದ್ದಳು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಶರಣಾಗುವುದಕ್ಕೂ ಕೆಲ ಹೊತ್ತು ಮುಂಚಿತವಾಗಿ ಇನ್ಸ್ಟಾಗ್ರಾಂನಲ್ಲಿ ಡ್ಯಾನ್ಸ್ ಮಾಡಿದ್ದ ವಿಡಿಯೋ ಶೇರ್ ಮಾಡಿದ್ದಳು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.