ನವದೆಹಲಿ:ದೇಶಾದ್ಯಂತ ಇಂದಿನಿಂದ ಕೊರೊನಾ ವ್ಯಾಕ್ಸಿನ್ ನೀಡಲು ಪ್ರಾರಂಭಿಸಲಾಗಿದ್ದು, ಮೊದಲ ದಿನ ಒಟ್ಟು 1,91,181 ಫಲಾನುಭವಿಗಳಿಗೆ ಈ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಲಸಿಕೆ ನೀಡಿದವರ ಪೈಕಿ ಯಾವುದೇ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಅಥವಾ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿರುವ ಮಾಹಿತಿ ಲಭ್ಯವಾಗಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೆರಂ ಇನ್ಸ್ಟಿಟ್ಯೂಟ್ನ ಕೊವಿಶೀಲ್ಡ್ ಹಾಗೂ 12 ರಾಜ್ಯಗಳಲ್ಲಿ ಭಾರತ್ ಬಯೋಟೆಕ್ನಿಂದ ಅಭಿವೃದ್ಧಿಗೊಂಡಿರುವ ಕೋವ್ಯಾಕ್ಸಿನ್ ನೀಡಲಾಗಿತ್ತು ಎಂದು ತಿಳಿಸಿದೆ. ಎರಡು ಲಸಿಕೆಗಳಿಂದ ದೇಶಾದ್ಯಂತ ಒಟ್ಟು 3,351 ಸೆಷನ್ ನಡೆದಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಭಾರತದಾದ್ಯಂತ ಒಟ್ಟು 16,755 ವ್ಯಾಕ್ಸಿನೇಟರ್ಗಳಿದ್ದವು ಎಂದಿದೆ.