ಚೆನ್ನೈ:ತಮಿಳುನಾಡಿನಲ್ಲಿ ಕೋವಿಡ್-19 ರೌದ್ರ ನರ್ತನ ತೋರುತ್ತಿದೆ. ಇಂದು ಒಂದೇ ದಿನದಲ್ಲಿ 17 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.
ಈರೋಡ್ ಜಿಲ್ಲೆಯಲ್ಲಿ 10, ಚೆನ್ನೈನಲ್ಲಿ 4, ತಿರುವರೂರ್ನಲ್ಲಿ 1 ಹಾಗೂ ಮದುರೈನಲ್ಲಿ 2 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ತಮಿಳುನಾಡಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟನೆ ನೀಡಿದೆ. ಕೆಲ ದಿನಗಳ ಹಿಂದೆ ಓರ್ವ ಕೊರೊನಾದಿಂದಾಗಿ ಮೃತಪಟ್ಟಿದ್ದು, ಐವರಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಈಗ ಒಂದೇ ಬಾರಿಗೆ 17 ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ತಳಮಳ ಮೂಡಿಸಿದೆ.
ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಕೂಡಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಸಾರ್ವಜನಿಕರು, ಮನೆಯಲ್ಲಿಯೇ ಇದ್ದು ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.