ಲಖನೌ(ಉತ್ತರ ಪ್ರದೇಶ):17 ವರ್ಷದ ಹುಡುಗಿಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬಲಿಯಾ ಪ್ರದೇಶದಲ್ಲಿ ನಡೆದಿದ್ದು, ಈಗಾಗಲೇ ಕಾಮುಕರನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರೈಲ್ವೆ ಸ್ಟೇಷನ್ಗೆ ತಮ್ಮ ಅಜ್ಜಿ ಭೇಟಿ ಮಾಡಲು ತೆರಳಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ಡ್ರಾಪ್ ನೀಡುವುದಾಗಿ ಹೇಳಿ ಆಕೆಯನ್ನ ರಿಕ್ಷಾದಲ್ಲಿ ಹತ್ತಿಸಿಕೊಂಡಿದ್ದಾರೆ. ಇದಾದ ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.