ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, 17 ವರ್ಷದ ಬಾಲಕಿವೋರ್ವಳ ಮೆಲೆ ಅತ್ಯಾಚಾರವೆಸಗಿ, ಭೀಕರವಾಗಿ ಕೊಲೆ ಮಾಡಲಾಗಿದೆ.
ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ತೀಕ್ಷ್ಣವಾದ ಆಯುಧಗಳಿಂದ ಆಕೆಯ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಆಕೆಯ ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಹಳ್ಳಿಯಿಂದ 200 ಮೀಟರ್ ದೂರದಲ್ಲಿ ಬಾಲಕಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ದೃಢಪಟ್ಟಿದೆ.
ಆರೋಪಿಗಳ ಶೋಧ ಕಾರ್ಯ ಈಗಾಗಲೇ ಆರಂಭಿಸಲಾಗಿದ್ದು, ಶೀಘ್ರದಲ್ಲಿ ಅವರ ಬಂಧನ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಪೋಷಕರು ತಿಳಿಸಿರುವ ಪ್ರಕಾರ ವಿದ್ಯಾರ್ಥಿವೇತನ ನಮೂನೆ ಭರ್ತಿ ಮಾಡಲು ಪಕ್ಕದ ಪಟ್ಟಣಕ್ಕೆ ತೆರಳಿದ್ದಳು. ಅಲ್ಲಿಂದ ವಾಪಸ್ ಬರದ ಕಾರಣಕ್ಕಾಗಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವೇಳೆ ಶೋಧ ಕಾರ್ಯ ನಡೆಸಿದಾಗ ಬಾಲಕಿ ಮೃತದೇಹ ಪತ್ತೆಯಾಗಿದೆ.
ಆಗಸ್ಟ್ 15ರಂದು 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ತದನಂತರ ಬಾಲಕಿ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನ ಮಾಡಲಾಗಿದೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ.