ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸಾಂವಿಧಾನಿಕ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡು ಇಂದಿಗೆ ಒಂದು ವರ್ಷವಾಗಿದೆ.
370ನೇ ವಿಧಿ ರದ್ದುಪಡಿಸಿ ಇಂದಿಗೆ ಒಂದು ವರ್ಷ: 'ಈಟಿವಿ ಭಾರತ'ದೊಂದಿಗೆ ಪಿಡಿಪಿ ನಾಯಕರ ಮಾತುಕತೆ ಅಂಕಿಅಂಶಗಳ ಪ್ರಕಾರ, ಆಗಸ್ಟ್ 5, 2019 ರಿಂದ ಜುಲೈ 23, 2020 ರ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 112 ಹಿಂಸಾಚಾರ ಪ್ರಕರಣಗಳು ನಡೆದಿವೆ. ಈ ವೇಳೆ 178 ಉಗ್ರರನ್ನು ಸೇನೆ ಸದೆಬಡಿದಿದೆ. 39 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇದೇ ಅವಧಿಯಲ್ಲಿ ಅವಧಿಯಲ್ಲಿ 36 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಒಂದು ವರ್ಷದಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಾದ ಬದಲಾವಣೆ ಏನು? 2020ರಲ್ಲಿ 50 ಎಕೆ -47 ರೈಫಲ್‌ಗಳು ಸೇರಿದಂತೆ 77 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. 2019ರಲ್ಲಿ 71 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆಗಸ್ಟ್ 5, 2019 ರ ನಂತರ ಕಾನೂನುಬಾಹಿರ ಚಟುವಟಿಕೆಗಳ (ನಿಯಂತ್ರಣ) ಕಾಯ್ದೆ (ಯುಎಪಿಎ) ಅಡಿಯಲ್ಲಿ 400 ಪ್ರಕರಣಗಳು ದಾಖಲಾಗಿದ್ದರೆ, ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಸುಮಾರು 300 ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾಗಿ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಈಟಿವಿ ಭಾರತದೊಂದಿಗೆ ಪಿಡಿಪಿ ನಾಯಕ ರೂಫ್ ದಾರ್ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕಾಶ್ಮೀರದಲ್ಲಾದ ರಾಜಕೀಯ ನಾಯಕರ ಬಂಧನ, ಅಲ್ಲಿನ ಮಕ್ಕಳು, ಮಹಿಳೆಯರು ಅನುಭವಿಸಿದ ಸಂಕಷ್ಟಗಳ ಕುರಿತು ಅವರು ಮಾತನಾಡಿದ್ದಾರೆ.