ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಸ್ ಪಲ್ಟಿ : 18 ವಲಸೆ ಕಾರ್ಮಿಕರಿಗೆ ಗಾಯ - ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಸ್ ಪಲ್ಟಿ

ಉತ್ತರ ಪ್ರದೇಶದ ಕಾನ್ಪುರದ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 18 ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ 3 ಜನರನ್ನು ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಉಳಿದವರನ್ನು ಸಿಎಚ್‌ಸಿಗೆ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಸ್ ಪಲ್ಟಿ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಸ್ ಪಲ್ಟಿ

By

Published : Jun 15, 2020, 11:30 PM IST

ಕಾನ್ಪುರ (ಉತ್ತರ ಪ್ರದೇಶ): ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಟೈರ್ ಸ್ಫೋಟಗೊಂಡು 64 ಮಂದಿ ವಲಸೆ ಕಾರ್ಮಿಕರಿದ್ದ ಬಸ್ ಉರುಳಿ ಬಿದ್ದು 18 ಮಂದಿ ಗಾಯಗೊಂಡಿದ್ದಾರೆ.

ದೆಹಲಿಯಿಂದ ಬಿಹಾರದ ಮುಜಾಫರ್​ಪುರಕ್ಕೆ ಹೋಗುತ್ತಿದ್ದ ಬಸ್ ಬಿಲ್ಹೌರ್ ಪ್ರದೇಶದ ಬಳಿ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ. ಬಸ್ ಪಲ್ಟಿಯಾಗುವ ಮುನ್ನ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ವಲಸಿಗರ ಕೂಗು ಕೇಳಿ ಬಂದು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಬಿಲ್ಹೌರ್ ಎಸ್‌ಎಚ್‌ಒ ಸಂತೋಷ್ ಕುಮಾರ್ ಅವಸ್ಥಿ ಹೇಳಿದ್ದಾರೆ.

ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ದಾಖಲಿಸಲಾಗಿದೆ. ತೀವ್ರವಾಘಿ ಗಾಯಗೊಂಡಿದ್ದ ಮೂವರನ್ನು ಲಾಲಾ ಲಜಪತ್ ರೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details