ಪತೇಪುರ್(ಉತ್ತರಪ್ರದೇಶ):ಉನ್ನಾವೊ ಅತ್ಯಾಚಾರ, ಕೊಲೆ ಘಟನೆ ಬಳಿಕ ಇದೀಗ ಉತ್ತರಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಪ್ರಕರಣ ನಡೆದಿದೆ. 18 ವರ್ಷದ ಯುವತಿ ಮೇಲೆ ದುಷ್ಕೃತ್ಯ ಎಸಗಿದ ಕಾಮುಕನೋರ್ವ ನಂತರ ಆಕೆಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ ದುರುಳ!
ಉತ್ತರಪ್ರದೇಶದ ಪತೇಪುರ್ನಲ್ಲಿ 18 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಸಾಂದರ್ಭಿಕ ಚಿತ್ರ
ಉತ್ತರಪ್ರದೇಶದ ಪತೇಪುರ್ದಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಯುವತಿ ಕಾನ್ಪುರ್ ಹಾಸ್ಪಿಟಲ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.
ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿರುವ ದುರುಳ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ಇದಾದ ಬಳಿಕ ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಆಕೆಯ ಮೈಮೇಲೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.