ಕರ್ನಾಟಕ

karnataka

ETV Bharat / bharat

ಪೊಲೀಸ್​ ಭದ್ರತೆ ಕೋರಿ ಡಿಜಿಪಿ ಮೊರೆ ಹೋದ ಮಧ್ಯಪ್ರದೇಶ 'ಕೈ'​​ ಶಾಸಕರು: ರೆಸಾರ್ಟ್​​ಗೆ ಪೊಲೀಸ್​ ಸರ್ಪಗಾವಲು

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಈಗಾಗಲೇ ಅಂತಿಮ ಹಂತಕ್ಕೆ ಬಂದು ತಲುಪಿದೆ. ಕರ್ನಾಟಕದಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್​ ಶಾಸಕರು ತಮಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

19 MP Congress MLAs demanding protection
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಾಸಕರು

By

Published : Mar 10, 2020, 4:56 PM IST

Updated : Mar 10, 2020, 5:37 PM IST

ಬೆಂಗಳೂರು: ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಿದ್ದು, ಈಗಾಗಲೇ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್​​ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹತ್ವದ ಕೆಲಸಕ್ಕಾಗಿ ನಾವು ಕರ್ನಾಟಕಕ್ಕೆ ಆಗಮಿಸಿದ್ದೇವೆ. ನಮಗೆ ಸೂಕ್ತ ಭದ್ರತೆಯ ಅವಶ್ಯಕತೆ ಇದೆ ಎಂದು ಶಾಸಕರು ಪೊಲೀಸ್​ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ.

ಸೂಕ್ತ ಭದ್ರತೆ ನೀಡುವಂತೆ ಪೊಲೀಸ್​ ಮಹಾನಿರ್ದೇಶಕರಿಗೆ ಪತ್ರ

ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್​​ನಲ್ಲಿ ಸಚಿವರೂ ಸೇರಿದಂತೆ 19 ಶಾಸಕರು ತಂಗಿದ್ದು, ತಮಗೆ ಎಸ್ಕಾರ್ಟ್ ಒದಗಿಸಬೇಕೆಂದು ಸಹಿ ಮಾಡಿದ ಪತ್ರವನ್ನು ಸಲ್ಲಿಸಿದ್ದಾರೆ.ಕಾಂಗ್ರೆಸ್ ನ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂದಿಯಾ ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಎಲ್ಲ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್​ ಶಾಸಕರು ಉಳಿದುಕೊಂಡಿರುವ ರೆಸಾರ್ಟ್​​

ಪೊಲೀಸ್​ ಸರ್ಪಗಾವಲು:

ಶಾಸಕರು ಉಳಿದುಕೊಂಡಿರುವ ರೆಸಾರ್ಟ್​ಗೆ ಇದೀಗ ಪೊಲೀಸ್​ ಭದ್ರತೆ ಒದಗಿಸಲಾಗಿದ್ದು, ರೆಸಾರ್ಟ್​​ ಗೇಟ್​ಗಳ ಸುತ್ತ ಬ್ಯಾರಿಕೇಡ್​ ಹಾಕಲಾಗಿದೆ. ಡಿವೈಎಸ್ಪಿ ರಂಗಪ್ಪ ನೇತೃತ್ವದಲ್ಲಿ ಸೆಕ್ಯೂರಿಟಿ ನೀಡಲಾಗಿದ್ದು, ಐವರು ಸಬ್​​ಇನ್ಸ್​​ಪೆಕ್ಟರ್​, ಇಬ್ಬರು ಸರ್ಕಲ್​​ ಇನ್ಸ್​ಪೆಕ್ಟರ್​ ಹಾಗೂ ಎರಡು ಕೆಸ್​​ಎಸ್​ಆರ್​ಪಿ ತುಕಡಿ ನಿಯೋಜಿಸಲಾಗಿದೆ.

Last Updated : Mar 10, 2020, 5:37 PM IST

ABOUT THE AUTHOR

...view details