ಕೊಲ್ಲಂ (ಕೇರಳ): ಕಬ್ಬಿಣದ ರಾಡ್ನಿಂದ ತಂದೆಯೇ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಂದೆಯಿಂದಲೇ ಮಗಳ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ವಶಕ್ಕೆ..! - ಕೇರಳದ ಕೊಲ್ಲಂ ಜಿಲ್ಲೆ
ಕೌಟುಂಬಿಕ ಕಲಹದಿಂದಾಗಿ ತಂದೆಯೇ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ.
ತಂದೆಯಿಂದಲೇ ಮಗಳ ಮೇಲೆ ಮಾರಣಾಂತಿಕ ಹಲ್ಲೆ
ಕಲಾಯಪುರಂನ ಪೆರುಕುಲಂ ಮೂಲದ ಸುಕುಮಾರ ಪಿಳ್ಳೈ ಎಂಬಾತ ತನ್ನ 19 ವರ್ಷದ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಯುವತಿ ಸ್ಥಿತಿ ಗಂಭೀರವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಸ್ಥಳಕ್ಕೆ ಸಿಐ ಜೋಸೆಫ್ ಲಿಯಾನ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಕುಮಾರ ಪಿಳ್ಳೈ ನಿತ್ಯ ಪತ್ನಿ ಹಾಗೂ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.