ಅಹಮದಾಬಾದ್: ಕೊರೊನಾ ಸೋಂಕು ದೇಶದೆಲ್ಲೆಡೆ ಭೀತಿ ಸೃಷ್ಠಿಸಿದ್ದು, ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ.
ಕೊರೊನಾ ಮುಂಜಾಗ್ರತೆ: ಸರ್ದಾರ್ ವಲ್ಲಭಬಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ 24 ಗಂಟೆ ತಪಾಸಣೆ - ಕೊರೊನಾ ಸೋಂಕಿನ ತಪಾಸಣೆ
ಕೊರೊನಾ ಭೀತಿಯಿಂದ ಗುಜರಾತ್ನ ಅಹಮದಾಬಾದ್ನಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಒಂದೇ ದಿನ 1,967 ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ.
ಪಟೇಲ್ ವಿಮಾನ ನಿಲ್ದಾಣದಲ್ಲಿ 24 ಗಂಟೆ ತಪಾಸಣೆ
ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ತೀವ್ರ ನಿಗಾ ವಹಿಸಿದ್ದು, ಗುಜರಾತ್ನ ಅಹಮದಾಬಾದ್ನಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ(ಬುಧವಾರ) ಒಂದೇ ದಿನ 1,967 ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಮನೋಜ್ ಗಂಗಲ್ ತಿಳಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ 2 ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ 10 ಸ್ಕ್ಯಾನರ್ಗಳನ್ನ ಹೊಂದಿದ್ದು, ದಿನದ 24 ಗಂಟೆಗಳ ಕಾಲ 12 ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಲಭ್ಯವಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.