ಮಯೂರ್ಭಂಜ್ (ಒಡಿಶಾ): ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಮದುವೆ ಆಗದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದ ಬಾರಿಪಡಾದಲ್ಲಿ ನಡೆದಿದೆ.
ಪರಸ್ಪರ ಪ್ರೀತಿಸಿ ಮದುವೆ ಆಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಜೋಡಿ!
ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
Lovers Commit Suicide
ಗ್ರಾಮದ ಹೊರಗಡೆಯ ಮರದಲ್ಲಿ ಇಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತರನ್ನ 24 ವರ್ಷದ ರಾಮೇಶ್ವರ್ ಹಾಗೂ 20 ವರ್ಷದ ಸಾಬಿತ್ರಿ ಎಂದು ಗುರುತಿಸಲಾಗಿದೆ.
ಮೃತದೇಹಗಳನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಕೆಲ ದಿನಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆ ಮಾಡಿಕೊಳ್ಳಲು ಕೆಲವೊಂದು ಅಡ್ಡಿ ಉಂಟಾದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.