ಶ್ರೀನಗರ: ಜಮ್ಮು - ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ: ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮ - ಉಗ್ರರ ದಾಳಿ
ಶ್ರೀನಗರದ ಹೊರವಲಯದಲ್ಲಿನ ತಂಗಾನ್ ಬೈಪಾಸ್ ಬಳಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.
ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ
ಶ್ರೀನಗರದ ಹೊರವಲಯದಲ್ಲಿನ ತಂಗಾನ್ ಬೈಪಾಸ್ ಬಳಿ ಕರ್ತವ್ಯದಲ್ಲಿದ್ದ ವೇಳೆ, ಉಗ್ರರು ಕೃತ್ಯ ಎಸಗಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಶ್ರೀನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸೆ.22 ರಂದು ಬುಡ್ಗಾಮ್ ಜಿಲ್ಲೆಯಲ್ಲಿ ಯೋಧನೊಬ್ಬನ ಮೇಲೆ ಗುಂಡು ಹಾರಿಸಿದ್ದ ಉಗ್ರರು, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದರು.