ಪಶ್ಚಿಮ ಬಂಗಾಳ:ಉತ್ತರ 24 ಪರಗಣಜಿಲ್ಲೆಯಕಮರಹತಿ ಗೋಲಾಘಾಟ್ ಪ್ರದೇಶದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಇಬ್ಬರು ಸಾವು - ಪಶ್ಚಿಮ ಬಂಗಾಳ
ಕಮರಹತಿ ಗೋಲಾಘಾಟ್ ಪ್ರದೇಶದ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಇಬ್ಬರು ಸಾವು
ಮೃತರನ್ನು ಸಾಜಿದ್ ಮತ್ತು ರಾಜಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕಮರ್ಹತಿಯ ಪೊಲೀಸರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದರು. ಕೂಡಲೇ ಸಾಗರ್ ದತ್ತಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಘಟನಾ ಸ್ಥಳದಲ್ಲಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.