ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿಂದು ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿ: ಇಬ್ಬರು ಎಲ್‌ಇಟಿ ಭಯೋತ್ಪಾದಕರು ಹತ - ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮೃತ
ಅನಂತ್‌ನಾಗ್‌ನಲ್ಲಿಂದು ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಬೇಟೆಯಾಡಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆಯೆಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.
ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿ; ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮೃತ
ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸೇರಿದಂತೆ ಸ್ಫೋಟಕ ವಸ್ತುಗಳನ್ನು ಭಯೋತ್ಪಾದಕರಿಂದ ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆಯೆಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.