ಕರ್ನಾಟಕ

karnataka

By

Published : Mar 4, 2020, 8:46 AM IST

ETV Bharat / bharat

ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರ... ಇಬ್ಬರ ವಿರುದ್ಧ ದೂರು ದಾಖಲು

ಅಪ್ರಾಪ್ತೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರದಂತಹ ಹೇಯ ಕೃತ್ಯಗಳ ತಡೆಗಾಗಿ ಕಠಿಣ ಕ್ರಮಗೊಂಡಿದ್ದರೂ ಕಾಮುಕರು ಮೇಲಿಂದ ಮೇಲೆ ಇಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದು, ಇದೀಗ ಅಂತಹುದೇ ಮತ್ತೊಂದು ಘಟನೆ ನಡೆದಿದೆ.

2 sisters raped repeatedly in UP's Mau
2 sisters raped repeatedly in UP's Mau

ಮೌ(ಉತ್ತರ ಪ್ರದೇಶ):ಇಬ್ಬರು ಅಪ್ರಾಪ್ತೆ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಒಬ್ಬ ವ್ಯಕ್ತಿಯ ಬಂಧನ ಮಾಡುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಮತ್ತೋರ್ವನಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಉತ್ತರಪ್ರದೇಶದ ಮೌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಕೆಲ ದಿನಗಳಿಂದ ಸಹೋದರಿಯರ ಮೇಲೆ ಇಬ್ಬರು ಕಾಮುಕರು ನಿರಂತರವಾಗಿ ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೆಯಿಂದ ಅವರನ್ನ ಬಲತ್ಕಾರವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದ್ದು, ಇಬ್ಬರು 9 ಹಾಗೂ 10 ವರ್ಷದ ಬಾಲಕಿಯರು ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ತಮ್ಮ ಅಕ್ಕಂದಿರ ಮುಂದೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಓರ್ವ ವ್ಯಕ್ತಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮತ್ತೋರ್ವನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅತ್ಯಾಚಾರಕ್ಕೊಳಗಾಗಿರುವ ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details