ನವದೆಹಲಿ:ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಪೆರಿಯಾರ್ ಹಾಸ್ಟೆಲ್ನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹಾಸ್ಟೆಲ್ ಅನ್ನು ಸೀಲ್ಡೌನ್ ಮಾಡಿದೆ. ಹಾಸ್ಟೆಲ್‌ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳನ್ನು 14 ದಿನ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಜೆಎನ್‌ಯು ಹಾಸ್ಟೆಲ್ನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಕೊರೊನಾ ಸೋಂಕಿಗೆ ಒಳಗಾದ ವಿದ್ಯಾರ್ಥಿಗಳನ್ನು ಐಸೋಲೇಷನ್ ಕೇಂದ್ರಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌ಗಳಲ್ಲಿ ವಾಸಿಸುವ ಇತರ ವಿದ್ಯಾರ್ಥಿಗಳನ್ನು 14 ದಿನ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
jnu
ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ ವಿದ್ಯಾರ್ಥಿಗಳನ್ನು ಐಸೋಲೇಷನ್ ಕೇಂದ್ರಕ್ಕೆ ಕಳುಹಿಸಲಾಗಿದೆ. ಕ್ವಾರಂಟೈನ್ನಲ್ಲಿರುವ ಇತರ ವಿದ್ಯಾರ್ಥಿಗಳಿಗೆ ಆಹಾರ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಆದ್ದರಿಂದ ಅವರು ಎಲ್ಲಿಯೂ ಹೋಗಬೇಕಾಗಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ.
ಹಾಸ್ಟೆಲ್ನಲ್ಲಿ ಕೊರೊನಾ ಸೋಂಕಿತರು ಪತ್ತೆಯಾದ ಕೂಡಲೇ ಇಡಿ ಹಾಸ್ಟೆಲ್ ಅನ್ನು ಸ್ಯಾನಿಟೈಸ್ಗೊಳಿಸಲಾಗಿದೆ. ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳಿಗೆ ಹೊರ ಹೋಗದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಹ ನೀಡಲಾಗಿದೆ.