ಕುಲ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ನಲ್ಲಿ ಎನ್ಕೌಂಟರ್... ಇಬ್ಬರು ಉಗ್ರರನ್ನು ಬೇಟೆಯಾಡಿದ ಸೈನಿಕರು - ಜಮ್ಮು ಮತ್ತು ಕಾಶ್ಮೀರ ಸುದ್ದಿ
ಕುಲ್ಗಾಮ್ ಜಿಲ್ಲೆಯ ವನ್‌ಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ವನ್‌ಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರ ಗುರುತು ಮತ್ತು ಯಾವ ಸಂಘಟನೆಗೆ ಸೇರಿದ್ದಾರೆ ಎಂದು ಪತ್ತೆ ಹಚ್ಚಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.
Last Updated : May 30, 2020, 12:04 PM IST