ಕರ್ನಾಟಕ

karnataka

ETV Bharat / bharat

ಇಬ್ಬರು ಮಹಿಳೆಯರಿಗೆ ಕೋವಿಡ್-19: ಮಾಹಾರಾಷ್ಟ್ರದಲ್ಲಿ 47ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ - ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆ

ಮುಂಬೈ ಮೂಲದ ಇಬ್ಬರು ಮಹಿಳೆಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ತಲುಪಿದೆ.

coronavirus in Mumbai,ಮಾಹಾರಾಷ್ಟ್ರದಲ್ಲಿ 47ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ
ಮಾಹಾರಾಷ್ಟ್ರದಲ್ಲಿ 47ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

By

Published : Mar 19, 2020, 12:28 PM IST

ಮುಂಬೈ(ಮಹಾರಾಷ್ಟ್ರ): ಮುಂಬೈನ ಇಬ್ಬರು ಮಹಿಳೆಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

22 ವರ್ಷದ ಯುವತಿ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿದ್ದಳು ಎಂದು ತಿಳಿದು ಬಂದಿದ್ದು, ಈಕೆಯಲ್ಲಿ ಸೋಂಕು ಪತ್ತೆಯಾಗಿದೆ. ಉಲ್ಹಾಸ್ ನಗರದ 49 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈಕೆ ದುಬೈಗೆ ಪ್ರಯಾಣ ಬೆಳೆಸಿದ್ದಳು ಎಂದು ತಿಳಿದುಬಂದಿದೆ.

ನೂತನ 2 ಪ್ರಕರಣಗಳಿಂದ ಮಹಾರಾಷ್ಟ್ರದ 47 ಮಂದಿಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.

ABOUT THE AUTHOR

...view details