ಕರ್ನಾಟಕ

karnataka

ETV Bharat / bharat

ಲಾಕ್​ಡೌನ್​ ನಿಯಮ ಉಲ್ಲಂಘನೆ.. 4 ಗಂಟೆ ನಡುರಸ್ತೆಯಲ್ಲೇ ಕುಳಿತ 200 ಜನ - ನಡುರಸ್ತೆಯಲ್ಲಿ ಕುಳಿತುಕೊಳ್ಳುವ ಶಿಕ್ಷೆ

ಕಟ್ಟುನಿಟ್ಟಾಗಿ ಲಾಕ್​ಡೌನ್​ ನಿಯಮ ಪಾಲನೆ ಮಾಡುವಂತೆ ಪೊಲೀಸರು ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಜನ ಬೀದಿಗಿಳಿಯತ್ತಿದ್ದಾರೆ. ಅಂತವರಿಗೆ ಪುಣೆ ಪೊಲೀಸರು ಸುಮಾರು 4 ಗಂಟೆ ನಡುರಸ್ತೆಯಲ್ಲೆ ಕೂರಿಸಿದ್ದಾರೆ.

Pune made to sit for 4 hours for defying lockdown norm
ಲಾಕ್​ಡೌನ್​ ನಿಯಮ ಉಲ್ಲಂಘನೆ

By

Published : Apr 17, 2020, 10:18 AM IST

Updated : Apr 17, 2020, 12:11 PM IST

ಪುಣೆ (ಮಹಾರಾಷ್ಟ್ರ):ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸುಮಾರು 200 ಜನರಿಗೆ ನಾಲ್ಕು ಗಂಟೆಗಳ ಕಾಲ ರಸ್ತೆಯಲ್ಲೇ ಕುಳಿತುಕೊಳ್ಳುವ ಶಿಕ್ಷೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಕೊರೊನಾ ವೈರಸ್ ಹರಡುವುದನ್ನು ನಿರ್ಬಂಧಿಸಲು ವಿಧಿಸಲಾಗಿದ್ದ ಲಾಕ್‌ಡೌನ್ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸುಮಾರು 200 ಜನರನ್ನು ಪುಣೆಯ ಸ್ವರ್ಗೇಟ್ ಪ್ರದೇಶದಲ್ಲಿ ನಾಲ್ಕು ಗಂಟೆಗಳ ಕಾಲ ರಸ್ತೆಯಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿದೆ' ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಶಬ್ಬೀರ್ ಸಯ್ಯದ್ ತಿಳಿಸಿದ್ದಾರೆ.

ಜನರಿಗೆ ಪರಿಸ್ಥಿತಿಯ ಗಂಭೀರತೆ ಮತ್ತು ಅವರಿಂದ ಎದುರಾಗಬಹುದಾದದ ಅಪಾಯವನ್ನು ಅರಿತುಕೊಳ್ಳುವುದಕ್ಕಾಗಿ ಇಂತಾ ಶಿಕ್ಷೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಪುಣೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಹೆಚ್ಚಳವಾಗಿದ್ದರೂ, ಕೆಲ ಜನರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಈವರೆಗೆ ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಸುಮಾರು 50 ಪ್ರಕರಣಗಳು ದಾಖಲಾಗಿದ್ದು, ಅವರ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Last Updated : Apr 17, 2020, 12:11 PM IST

ABOUT THE AUTHOR

...view details