ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅಪರಾಧಿಗೆ ಗಲ್ಲುಶಿಕ್ಷೆ ಫಿಕ್ಸ್ ಆಗಿದೆ.
2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಆರೋಪ ಸಾಬೀತಾಗಿ, ಕಳೆದ ವರ್ಷ ಅಪರಾಧಿಗಳಿಗೆ ಸರ್ವೋಚ್ಛ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್, ಸುಪ್ರೀಂ ಕೋರ್ಟ್ ನೀಡಿರುವ ಮರಣ ದಂಡನೆ ತೀರ್ಪು ಮರುಪರಿಶೀಲನೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ. ಇಂದು ಇದರ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ಪ್ರಕಟಿಸಿದೆ.