ನವದೆಹಲಿ:2012ರ ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಇಂದು ಬೆಳಗ್ಗೆ 5:30ಕ್ಕೆ ತಿಹಾರ್ ಜೈಲಿನಲ್ಲಿ ನೇಣು ಗಂಬಕ್ಕೇರಿಸಲಾಗಿದ್ದು, ಕೊನೆಗೂ ಏಳು ವರ್ಷದ ಪ್ರಕರಣ ಅಂತ್ಯಗೊಂಡಿದೆ.
ಇಂದು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದು ಕನ್ಫರ್ಮ್ ಆಗುತ್ತಿದ್ದಂತೆ ಅಪರಾಧಿಗಳ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅದನ್ನ ವಜಾಗೊಳಿಸಲಾಗಿತ್ತು. ಇದಾದ ಬಳಿಕ ಹೊಸ ಅರ್ಜಿ ಸಲ್ಲಿಕೆ ಮಾಡಿದ್ದ ವಕೀಲರು ದೆಹಲಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದರ ಬೆನ್ನಲ್ಲೇ ತಡರಾತ್ರಿ ಮತ್ತೊಮ್ಮೆ ದೆಹಲಿ ಕೋರ್ಟ್ ತೀರ್ಪು ಪ್ರಶ್ನೆ ಮಾಡಿ ಅಪರಾಧಿ ಪವನ್ ಗುಪ್ತಾ ಪರ ವಕೀಲರಾಗಿದ್ದ ಎಪಿ ಸಿಂಗ್ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಅದರಂತೆ ರಾತ್ರಿ 1 ಗಂಟೆಗೆ ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ಮನೆಗೆ ತೆರಳಿ ಅಪರಾಧಿಗಳ ಪರ ವಕೀಲ ಎಪಿ ಸಿಂಗ್ ತುರ್ತು ವಿಚಾರಣೆ ನಡೆಸುವಂತೆ ಮನವಿ ಸಲ್ಲಿಕೆ ಮಾಡಿದ್ದರು.