ಗುರುಗ್ರಾಮ್( ಹರಿಯಾಣ):ಖಾಸಗಿ ಆಸ್ಪತ್ರೆಯತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಹಿಳಾ ರೋಗಿ ಮೇಲೆ ಅತ್ಯಾಚಾರವೆಗಿರುವ ಅಮಾನವೀಯ ಘಟನೆ ನಡೆದಿದೆ.
ಗುರುಗ್ರಾಮ್ನ ಸೆಕ್ಟರ್ 44ರ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಯುವತಿ ಕ್ಷಯ ರೋಗಕ್ಕಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಾಗ ಮಹಿಳೆ ಅರೆಪ್ರಜ್ಞಾವಸ್ಥೆಯಲ್ಲಿದ್ದರು ಎನ್ನಲಾಗಿದೆ.
ಪ್ರಜ್ಞೆ ಬಂದ ಬಳಿಕ ಕೈಬರಹದ ಮೂಲಕ ಹಾಳೆಯಲ್ಲಿ ಬರೆದು ಘಟನೆ ಬಗ್ಗೆ ತಂದೆಗೆ ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್ 21ರಂದು ಆಕೆ ಆಸ್ಪತ್ರೆಗೆ ದಾಖಲಾಗಿದ್ದಳು. ಉಸಿರಾಟದ ತೊಂದರೆ ಕಾರಣ ಆಸ್ಪತ್ರೆಯ ಐಸಿಯುನಲ್ಲಿ ಪ್ರತ್ಯೇಕ ಕೋಣೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳ ಗುರುತಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಆಸ್ಪತ್ರೆ ಆಡಳಿತ ಮಂಡಳಿ, ಮಹಿಳೆ ತೀವ್ರ ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಷಯರೋಗದಿಂದಾಗಿ ಅಕ್ಟೋಬರ್ 21ರಂದು ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾದ ಆರು ದಿನಗಳ ನಂತರ ಅತ್ಯಾಚಾರ ನಡೆದಿರುವ ಬಗ್ಗೆ ದೂರು ನೀಡಿದ್ದಾಳೆ. ಈಗಾಗಲೇ ಇದರ ಬಗ್ಗೆ ನಾವು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸಂಪೂರ್ಣ ಸಹಕಾರ ನೀಡಲು ನಾವು ಸಿದ್ದರಿದ್ದೇವೆ. ಅವಳು ಚೇತರಿಸಿಕೊಂಡ ನಂತರ ಕೌನ್ಸಿಲಿಂಗ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.