ನವದೆಹಲಿ:ಎರಡನೇ ಅವಧಿಯ ಮೋದಿ ಸರ್ಕಾರ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದ್ದು ಸದ್ಯ 22 ತೆರಿಗೆ ಅಧಿಕಾರಿಗಳನ್ನು ಭ್ರಷ್ಟಾಚಾರದ ಆರೋಪದಲ್ಲಿ ವಜಾಗೊಳಿಸಿದೆ.
ಭ್ರಷ್ಟರ ಪಾಲಿಗೆ ಮೋದಿ ಸರ್ಕಾರ ಸಿಂಹಸ್ವಪ್ನ... 22 ಅಧಿಕಾರಿಗಳಿಗೆ ಗೇಟ್ಪಾಸ್..!
ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯ 22 ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿದೆ. ಭ್ರಷ್ಟಾಚಾರ ಹಾಗೂ ಇನ್ನಿತರ ಅಪರಾಧಗಳು ಆ ಅಧಿಕಾರಿಗಳ ಮೇಲೆ ದಾಖಲಾದ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಸ್ಪಷ್ಟನೆ ನೀಡಿದೆ.
ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ
ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ 22 ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಲಾಗಿದ್ದು, ಭ್ರಷ್ಟಾಚಾರ ಹಾಗೂ ಇನ್ನಿತರ ಅಪರಾಧಗಳು ಆ ಅಧಿಕಾರಿಗಳ ಮೇಲೆ ದಾಖಲಾದ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಸ್ಪಷ್ಟನೆ ನೀಡಿದೆ.
ಇದಕ್ಕೂ ಮುನ್ನ ಕೆಲ ತಿಂಗಳ ಹಿಂದೆ ಭ್ರಷ್ಟಾಚಾರ ಆರೋಪ ಹೊಂದಿದ್ದ 27 ಹಿರಿಯ ಕಂದಾಯ ಅಧಿಕಾರಿಗಳಿಗೆ ಹಣಕಾಸು ಇಲಾಖೆ ಮನೆ ದಾರಿ ತೋರಿಸಿತ್ತು. ಇದೀಗ ಮತ್ತೊಂದು ಹಂತದ ಸ್ವಚ್ಛತೆಯಲ್ಲಿ 22 ಅಧಿಕಾರಿಗಳು ಮನೆ ದಾರಿ ಹಿಡಿದಿದ್ದಾರೆ.