ಕರ್ನಾಟಕ

karnataka

ETV Bharat / bharat

ಕೊರೊನಾ ಗೆದ್ದ 24 ದಿನದ ಮಗು; 34 ಮಕ್ಕಳು ಆಸ್ಪತ್ರೆಯಿಂದ ಡಿಸ್ಚಾರ್ಜ್ - 34 ಮಕ್ಕಳು ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ 24 ದಿನದ ಮಗು ಜಯ ಸಾಧಿಸಿದ್ದು, ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದೆ.

24-day-old baby girl recovers
24-day-old baby girl recovers

By

Published : May 2, 2020, 1:46 PM IST

ಭೋಪಾಲ್​​:ದೇಶವೇ ಮಹಾಮಾರಿ ಕೊರೊನಾ ವಿರುದ್ಧ ಹೋರಾಟ ನಡೆಸಿದ್ದು, ಕೆಲವೊಂದು ಪ್ರದೇಶಗಳಲ್ಲಿ ದಿನ ಕಳೆದಂತೆ ಅತಿ ಹೆಚ್ಚು ಪ್ರಕರಣ ಕಂಡು ಬರುತ್ತಿವೆ. ಇದರ ಮಧ್ಯೆ ಭೋಪಾಲ್​​ನಲ್ಲಿ 24 ದಿನದ ಶಿಶುವೊಂದು ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆಲುವು ಸಾಧಿಸಿದೆ.

ಮಧ್ಯಪ್ರದೇಶದ ಭೋಪಾಲ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದ 24 ದಿನದ ನವಜಾತ ಶಿಶು ಇದೀಗ ಸಂಪೂರ್ಣವಾಗಿ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್​​ 11ರಿಂದ ಈ ಮಗು ಜನಸಿದ್ದು, ಮಗುವಿನ ಹೆರಿಗೆ ಮಾಡಿಸಿಕೊಂಡಿದ್ದ ನರ್ಸ್​ವೋರ್ವರಿಗೆ ಕೋವಿಡ್​ ಕಾಣಿಸಿಕೊಂಡಿದ್ದರಿಂದ ಅದು ಶಿಶುವಿಗೂ ತಗುಲಿತ್ತು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದೆ ಎಂದು ಪೋಷಕರು ತಿಳಿಸಿದ್ದಾರೆ.

34 ಮಕ್ಕಳು ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಒಟ್ಟು 34 ಮಕ್ಕಳು ಸಂಪೂರ್ಣವಾಗಿ ಗುಣಮುಖರಾಗಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇದರಲ್ಲಿ 31 ಮಕ್ಕಳು ಭೋಪಾಲ್​ನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ABOUT THE AUTHOR

...view details