ಶ್ರೀನಗರ:ಸುಮಾರು ಹತ್ತು ಸಾವಿರ ಸೈನಿಕರನ್ನು ಕಾಶ್ಮೀರಕ್ಕೆ ಕಳುಹಿಸಿ ವಾರ ಕಳೆಯೋದರ ಒಳಗಾಗಿ ಕಣಿವೆ ರಾಜ್ಯಕ್ಕೆ ಇದೀಗ ಮತ್ತಷ್ಟು ಸೈನಿಕರನ್ನು ಕಳುಹಿಸಲಾಗಿದೆ.
ಮಂಗಳವಾರದಿಂದ ಕಣಿವೆ ರಾಜ್ಯಕ್ಕೆ ಹೆಚ್ಚುವರಿ 25,000 ಸೈನಿಕರನ್ನು ಕಳುಹಿಸಲಾಗಿದ್ದು ಈ ಮೂಲಕ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಮೋದಿ ಸರ್ಕಾರ ಪಣತೊಟ್ಟಿದೆ.
ವಿಧ್ವಂಸಕ ಕೃತ್ಯಕ್ಕೆ ಉಗ್ರರ ತಯಾರಿ; ಕಾಶ್ಮೀರಕ್ಕೆ ದೌಡಾಯಿಸಿದ ಹೆಚ್ಚುವರಿ ಸೇನೆ
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕಳೆದ ವಾರ ಎರಡು ದಿನದ ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಕಾಶ್ಮೀರ ಪ್ರವಾಸದಲ್ಲಿ ಧೋವಲ್ , ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು.
ಉತ್ತರ ಕಾಶ್ಮೀರದಲ್ಲಿ ಸೈನಿಕರ ಸಂಖ್ಯೆ ಕಡಿಮೆ ಇದೆ ಎನ್ನುವ ವಿಚಾರವನ್ನು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಕೆಲ ದಿನಗಳ ಹಿಂದೆ ಹೇಳಿದ್ದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸ್ತುತ ಈ ರಾಜ್ಯ ರಾಷ್ಟ್ರಪತಿ ಆಡಳಿತದಲ್ಲಿದೆ.