ನವದೆಹಲಿ:ಲೋಕಸಭಾ ಚುನಾವಣೆಗೆ ಏಪ್ರಿಲ್ 18ರಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಿದೆ. ಒಟ್ಟು 13 ರಾಜ್ಯಗಳ 97 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಕ್ರಿಮಿನಲ್ ಹಿನ್ನೆಲೆಯಿರುವ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ. ಇವರ ವಿರುದ್ಧ ಕೊಲೆ, ಮಹಿಳೆಯರ ಮೇಲೆ ದೌರ್ಜನ್ಯ ಹಾಗು ಅಪಹರಣದಂತಹ ಗಂಭೀರ ಸ್ವರೂಪದ ಪ್ರಕರಣವಿದೆ.
ಎರಡನೇ ಹಂತದ ಚುನಾವಣೆಯಲ್ಲಿ ವಿವಿಧ ಪಕ್ಷಗಳಿಂದ ಹಾಗು ಸ್ವತಂತ್ರವಾಗಿ 1,644 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ನ್ಯಾಷನಲ್ ಎಲೆಕ್ಷನ್ ವಾಚ್ ಹಾಗೂ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ ಸಂಸ್ಥೆ ಕಣದಲ್ಲಿರುವ ಘಟಾನುಘಟಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಕಣದಲ್ಲಿರುವ1,590 ಅಭ್ಯರ್ಥಿಗಳ ಪೈಕಿ 251 ಮಂದಿ ವಿರುದ್ಧ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ದಾಖಲಾಗಿರುವುದಾಗಿ ಹೇಳಿದೆ.
ಅಂಕಿ ಅಂಶಗಳ ಪ್ರಕಾರ, ಈ 251 ಅಭ್ಯರ್ಥಿಗಳಲ್ಲಿಮೂವರು ಅಭ್ಯರ್ಥಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಇನ್ನು, 25 ಮಂದಿ ವಿರುದ್ಧ ಕೊಲೆಯತ್ನ, 8 ಮಂದಿ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲಾಗಿದೆ.