ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಒಂದೇ ದಿನ 28 ಸಾವಿರ ಕೊರೊನಾ ಕೇಸ್: ಶೇ 62.78 ರಷ್ಟು ರೋಗಿಗಳು ಗುಣಮುಖ - Ministry of Health

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,49,553ಕ್ಕೆ ಹಾಗೂ ಮೃತರ ಸಂಖ್ಯೆ 22,674ಕ್ಕೆ ಏರಿಕೆಯಾಗಿದೆ.

Total number of corona cases in India
ಭಾರತದಲ್ಲಿ ಕೊರೊನಾ ಪ್ರಕರಣಗಳು

By

Published : Jul 12, 2020, 10:27 AM IST

ನವದೆಹಲಿ: ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಈವರೆಗೆ 8.5 ಲಕ್ಷ ಪ್ರಕರಣಗಳು ವರದಿಯಾಗಿದೆ. ಚೇತರಿಕೆಯ ಪ್ರಮಾಣದಲ್ಲೂ ಗಣನೀಯ ಏರಿಕೆ ಕಂಡು ಬಂದಿದ್ದು, ಶೇ.62.78 ರಷ್ಟು ರೋಗಿಗಳು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 28,637 ಸೋಂಕಿತರು ಪತ್ತೆಯಾಗಿದ್ದು, 551 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 8,49,553ಕ್ಕೆ ಹಾಗೂ ಮೃತರ ಸಂಖ್ಯೆ 22,674ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ ಶೇ.62.78 ರಷ್ಟು ಅಂದರೆ 5,34,621 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 2,92,258 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details