ಹೈದರಾಬಾದ್: ತೆಲಂಗಾಣದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮಲ್ಲಾರೆಡ್ಡಿ ಒಡೆತನದ ಮಲ್ಲಾರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ನಿಂದ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಸಚಿವರ ಕಾಲೇಜ್ನಲ್ಲೇ ನಡೀತು ದುರಂತ: ಬಿಟೆಕ್ ವಿದ್ಯಾರ್ಥಿನಿ ಮೇಲೆ ಲ್ಯಾಬ್ ಟೆಕ್ನಿಶಿಯನ್ ಅತ್ಯಾಚಾರ...! - ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ದೇಶದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದೆ. ಹೈದರಾಬಾದ್ನಲ್ಲಿ ದಿಶಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಂತರವೂ ಕೂಡಾ ಕಾಮುಕರ ಅಟ್ಟಹಾಸ ಮುಂದುವರೆದಿದೆ. ತೆಲಂಗಾಣದ ರಾಜ್ಯ ಸಚಿವ ಮಾಲೀಕತ್ವ ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರ ಮೇಲೆ ಲ್ಯಾಬ್ ಟೆಕ್ನಿಷಿಯನ್ನಿಂದ ಅತ್ಯಾಚಾರ ಆರೋಪ ಕೇಳಿಬಂದಿದೆ.

ಸಾಂದರ್ಭಿಕ ಚಿತ್ರ
ಈ ಕುರಿತು ಪೆಟ್ಬಶೀರ್ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. '' ಕೆಲ ದಿನಗಳ ಹಿಂದೆ ಯುವತಿಯನ್ನು ಕಾಲೇಜಿನ ಲ್ಯಾಬ್ನಲ್ಲಿ ಅಲ್ಲಿದ್ದ ಟೆಕ್ನಿಷಿಯನ್ ಅತ್ಯಾಚಾರ ಮಾಡಿದ್ದಾನೆ. ವಿಷಯ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನ'' ಎಂದು ಯುವತಿ ದೂರು ನೀಡಿದ್ದಾಗಿ ಪೆಟ್ಬಶೀರ್ಬಾದ್ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಹಾಗೂ ಎಸ್ಸಿ/ ಎಸ್ಟಿ ಌಕ್ಟ್ನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಪ್ರಕರಣದ ತನಿಖೆ ಮುಂದುವರೆದಿದೆ.
Last Updated : Dec 25, 2019, 8:49 PM IST