ಠಾಕೂರ್‌ಪುಕೂರ್:ಒಂದೇ ಕುಟುಂಬದ ಮೂವರು ಸದಸ್ಯರ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತಾದ ಠಾಕೂರ್‌ಪುಕೂರ್ ಠಾಣಾ ವ್ಯಾಪ್ತಿಯಲ್ಲಿ ಕಂಡು ಬಂದಿದೆ.
ಇಂದು ಬೆಳಗ್ಗೆ ಕುಟುಂಬದ ಮೂವರು ಸದಸ್ಯರ ದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡಲ್ಪರ ಬಾಡಿ ಬಿಲ್ಡಿಂಗ್ ಸೊಸೈಟಿ ಬಳಿ ಕಂಡು ಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.