ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ.
ಜಾಮಿಯಾ ಮಿಲಿಯಾ ವಿವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು... ನಾಲ್ಕನೇ ದಿನದಲ್ಲಿ ಮೂರನೇ ದಾಳಿ! - ಪೌರತ್ವ ತಿದ್ದುಪಡಿ ಕಾಯ್ದೆ
ರಾಷ್ಟ್ರ ರಾಜಧಾನಿ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ಕೇಳಿ ಬಂದಿದ್ದು, ನಿನ್ನೆ ತಡರಾತ್ರಿ ಇಬ್ಬರು ದುಷ್ಕರ್ಮಿಗಳು ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ.
ಕಳೆದ ರಾತ್ರಿ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು, ಇದೀಗ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ವಿವಿಯ ಗೇಟ್ ನಂಬರ್ 5 ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಸ್ಕೂಟರ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದರಲ್ಲಿ ಓರ್ವ ದುಷ್ಕರ್ಮಿಗಳಲ್ಲೊಬ್ಬ ಕೆಂಪು ಬಣ್ಣದ ಜಾಕೆಟ್ ಧರಿಸಿದ್ದ ಎಂದು ತಿಳಿದು ಬಂದಿದೆ.
ಕಳೆದ ಕೆಲ ದಿನಗಳಿಂದ ಜಾಮಿಯಾ ಮಿಲಿಯಾ ವಿವಿಯಲ್ಲಿ ವಿದ್ಯಾರ್ಥಿಗಳು ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಈ ಹಿಂದೆ ಸಹ ವಿದ್ಯಾರ್ಥಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ಜಾಮಿಯಾದಿಂದ ರಾಜ್ಘಾಟ್ ಕಡೆಗೆ ಮೆರವಣಿಗೆ ನಡೆಸಲು ಸಿಎಎ ವಿರೋಧಿ ಪ್ರತಿಭಟನಾಕಾರರು ಸಿದ್ದತೆ ನಡೆಸುತ್ತಿದ್ದ ಸಂದರ್ಭದಲ್ಲಿ ಗುಂಡಿನ ಮೊರೆತ ಕೇಳಿ ಬಂದಿತ್ತು.