ನವದೆಹಲಿ:ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನೇ ದಿನೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ 200ರ ಗಡಿ ತಲುಪಿದೆ.
ಭಾರತದಲ್ಲಿ ದ್ವಿಶತಕ, ಮಹಾರಾಷ್ಟ್ರದಲ್ಲಿ ಅರ್ಧಶತಕ ತಲುಪಿದ ಕೊರೊನಾ ಸೋಂಕಿತರ ಸಂಖ್ಯೆ - ಕೊರೊನಾ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ಕ್ಕೆ ಏರಿಕೆಯಾಗಿದ್ದು, ಸೋಕಿನಿಂದ ಚೇತರಿಕೆ ಕಂಡಿದ್ದ 69 ವರ್ಷದ ಇಟಲಿ ಪ್ರಜೆ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳಳನ್ನು ಕೈಗೊಂಡ ನಂತರವೂ ಇಂದು 7 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇತ್ತ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಅರ್ಧ ಶತಕ ತಲುಪಿದೆ. ಇಂದು ನೂತನವಾಗಿ ಮೂರು ಜನರಲ್ಲಿ ಸೋಂಕು ಕಂಡುಬಂದಿದ್ದು ಮಾಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ತಿಳಿಸಿದ್ದಾರೆ.
ಜೈಪುರದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ 69 ವರ್ಷದ ಇಟಲಿ ಪ್ರವಾಸಿ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರ, ಪಂಜಾಬ್, ಉತ್ತರ ಪ್ರದೇಶ, ಆಂಧ್ರ ಪ್ರದೇಶದಲ್ಲಿ ಇಂದು ಕೆಲವರಲ್ಲಿ ಸೋಂಕು ಕಂಡುಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.