ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ದಾಟಿ ಭಾರತೀಯ ಭೂಪ್ರದೇಶಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಮೂಲದ ಮೂವರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ.
ಗಡಿಯೊಳಗೆ ನುಸುಳಲು ಯತ್ನ: ಪಾಕ್ ಮೂಲದ 3 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ - ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ದಾಟಿ ಭಾರತೀಯ ಭೂಪ್ರದೇಶಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಪಾಕಿಸ್ತಾನ ಮೂಲದ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಮೇ 28ರಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿರುವವರ ಮೇಲೆ ಭಾರತೀಯ ಸೇನೆ ನೌಶೇರಾ ವಲಯದಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕಾರ್ಯಾಚರಣೆ ನಡೆಸಿ ಉಗ್ರರ ಯತ್ನವನ್ನು ವಿಫಲಗೊಳಿಸಿದೆ. ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರಿಗೆ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗಿದೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಅಶಾಂತಿ ಉಂಟುಮಾಡಲು ಭಯೋತ್ಪಾದಕರು ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದಾರೆ ಎಂಬ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಪಾಕಿಸ್ತಾನವು ಭಯೋತ್ಪಾದಕರಿಗೆ ಭಾರತದ ಒಳಕ್ಕೆ ನುಸುಳಲು ಸಹಾಯ ಮಾಡುತ್ತಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.