ಎರ್ನಾಕುಲಂ (ಕೇರಳ):ಇಲ್ಲಿನ ಮಂಜುಮಾಲ್ನಲ್ಲಿ ನಡೆದಿದ್ದ 16ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಶಾಯಿದ್, ಫರ್ಹದ್ ಖಾನ್ ಮತ್ತು ಹನೀಫಾ ಬಂಧಿತ ಆರೋಪಿಗಳಾಗಿದ್ದು, ಇನ್ನೂ ಮೂವರು ರಾಜ್ಯದಿಂದ ಪಲಾಯನಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೂವರು ಲಾಕ್ಡೌನ್ ವೇಳೆ ವಲಸೆ ಕಾರ್ಮಿಕರಿಗಾಗಿ ನಿಯೋಜಿಸಿದ್ದ ವಿಶೇಷ ರೈಲಿನಲ್ಲಿ ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.