ನವದೆಹಲಿ :ಇಲ್ಲಿನ ಏಮ್ಸ್ನಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಹಾಗೂ ತಂತ್ರಜ್ಞರು ಸೇರಿ 30 ಜನರಿಗೆ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿದೆ. ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ 72 ವರ್ಷದ ವೃದ್ಧನೊಬ್ಬನಿಗೆ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ದೆಹಲಿ ಏಮ್ಸ್ನ 30 ಆರೋಗ್ಯ ಸಿಬ್ಬಂದಿಗೆ ಕ್ವಾರಂಟೈನ್.. - ಕ್ವಾರಂಟೈನ್
ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ವಯೋವೃದ್ಧನಿಗೆ ಕೋವಿಡ್ ಸೋಂಕು ತಗುಲಿರುವುದು ದೃಢ ಪಟ್ಟಿರುವುದರಿಂದ ಏಮ್ಸ್ನ 30 ಆರೋಗ್ಯ ಸಿಬ್ಬಂದಿಗೆ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿದೆ.
ನರದೌರ್ಬಲ್ಯ ಸಮಸ್ಯೆಯ ಚಿಕಿತ್ಸೆಗಾಗಿ ಬಂದ ರೋಗಿಯು ಉಸಿರಾಟದ ತೊಂದರೆಯಿಂದಲೂ ಬಳಲುತ್ತಿರುವುದು ಗಮನಕ್ಕೆ ಬಂದ ನಂತರ ಆತನಿಗೆ ಕೋವಿಡ್-19 ಟೆಸ್ಟ್ ನಡೆಸಲಾಗಿತ್ತು. ಟೆಸ್ಟ್ನಲ್ಲಿ ಕೋವಿಡ್-19 ಪಾಸಿಟಿವ್ ಬಂದಿತ್ತು. ತಕ್ಷಣ ರೋಗಿಯನ್ನು ಏಮ್ಸ್ನ ಮೀಸಲು ಕೋವಿಡ್-19 ವಿಭಾಗಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ಮಧ್ಯೆ ರೋಗಿಯ ಸಂಪರ್ಕಕ್ಕೆ ಬಂದಿರುವವರನ್ನು ಗುರುತಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ರೋಗಿಯು ಮೊದಲು ದಾಖಲಾಗಿದ್ದ ನ್ಯೂರಾಲಜಿ ವಿಭಾಗವನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದೆ. ಕೋವಿಡ್ ಸೋಂಕಿತ ರೋಗಿಯ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.