ತಿರುವನಂತಪುರ:ಪ್ರಸಕ್ತ ವರ್ಷದಿಂದಲೇ ಕೇರಳದ ನಾಲ್ಕು ವಿಮಾನ ನಿಲ್ದಾಣಗಳಿಂದ ಹೆಚ್ಚುವರಿಯಾಗಿ 30ಕ್ಕೂ ಅಧಿಕ ವಿಮಾನಗಳ ಹಾರಾಟ ನಡೆಸಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಕಾರ್ಯದರ್ಶಿ ಪ್ರದೀಪ್ ಸಿಂಗ್ದ ಖರೊಲ ತಿಳಿಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆದಿದ್ದ ವಾಯುವಾಯನ ಸಂಸ್ಥೆಗಳ ಮುಖ್ಯಸ್ಥರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಈ ಹಿಂದೆ ಭರವಸೆ ನೀಡಿದ್ದಂತೆ ಏವಿಯೇಷನ್ ಟರ್ಬೈನ್ ಇಂಧನ (ಎಟಿಎಫ್) ಮೇಲಿನ ತೆರಿಗೆಯನ್ನು ರಾಜ್ಯ ಸರ್ಕಾರದ ವತಿಯಿಂದ ಕಡಿತಗೊಳಿಸಲಾಗಿದೆ. ಹೆಚ್ಚುವರ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಲು ಇದಕ್ಕಿಂತ ಬೇರೆ ನಿರ್ಧಾರಬೇಕಿಲ್ಲ ಎಂಬುದನ್ನು ಕಾರ್ಯದರ್ಶಿಯ ಗಮನಕ್ಕೆ ತಂದರು.