ಕಿಸ್ತ್ವಾರ್:ಜಮ್ಮು ಮತ್ತು ಕಾಶ್ಮೀರದ ಕಿಸ್ತ್ವಾರ್ ಜಿಲ್ಲೆಯ ಕೆಶ್ವಾನ್ ಎಂಬಲ್ಲಿ ಮಿನಿ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 35 ಜನ ಸಾವಿಗೀಡಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್ 35 ಪ್ರಯಾಣಿಕರು ಸಾವು: ಹಲವು ಜನರಿಗೆ ಗಾಯ - JK Police
ಜಮ್ಮು ಮತ್ತು ಕಾಶ್ಮೀರದಲ್ಲಿ ಮಿನಿ ಬಸ್ ಕಂದಕಕ್ಕೆ ಉರುಳಿಬಿದ್ದು 35 ಜನ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್
ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಮೂವರು ಮಹಿಳೆಯರನ್ನ ಹೆಲಿಕಾಪ್ಟರ್ ಮೂಲಕ ಜಮ್ಮು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮತ್ತಷ್ಟು ಜನರನ್ನು ಏರ್ ಲಿಫ್ಟ್ ಮಾಡುವ ಸಾಧ್ಯತೆ ಇದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೆ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 11 ಜನ ವಿದ್ಯಾರ್ಥಿಗಳು ಸಾವಿಗೀಡಾಗಿದ್ದರು.
Last Updated : Jul 1, 2019, 12:10 PM IST