ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರದಲ್ಲಿ ಲಾಕ್​ಡೌನ್​, ಕ್ವಾರಂಟೈನ್​ ನಿಯಮ ಉಲ್ಲಂಘನೆ: 35,000 ಪ್ರಕರಣ ದಾಖಲು - Maharashtra lockdown news

ಲಾಕ್​ಡೌನ್​ ಆರಂಭವಾದಾಗಿನಿಂದ ಮಹಾರಾಷ್ಟ್ರ ಪೊಲೀಸರು ಐಪಿಸಿ ಸೆಕ್ಷನ್ 188 ರಡಿಯಲ್ಲಿ ಕನಿಷ್ಠ 2,525 ಜನರನ್ನು ಬಂಧಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ 70 ಹಲ್ಲೆ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ 161 ಜನರನ್ನು ಬಂಧಿಸಲಾಗಿದೆ ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Maharashtra police
ಮಹಾರಾಷ್ಟ್ರ ಪೊಲೀಸ್​

By

Published : Apr 12, 2020, 1:31 PM IST

ಮುಂಬೈ: ಲಾಕ್​ಡೌನ್​ ಆದೇಶಗಳು ಹಾಗೂ ಕ್ವಾರಂಟೈನ್​ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಮಹಾರಾಷ್ಟ್ರ ಪೊಲೀಸರು ರಾಜ್ಯದಾದ್ಯಂತ 35,000 ಕ್ಕೂ ಹೆಚ್ಚು ಅಪರಾಧಗಳನ್ನು ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಮಾರ್ಚ್ 22 ರಿಂದ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಅಪರಾಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಮೂಲಕ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಆರಂಭಿಸಿದರು. ಅಲ್ಲಿಂದ ಈವರೆಗೆ ಮಹಾರಾಷ್ಟ್ರ ಪೊಲೀಸರು ಐಪಿಸಿ ಸೆಕ್ಷನ್ 188 ರಡಿಯಲ್ಲಿ ಕನಿಷ್ಠ 2,525 ಜನರನ್ನು ಬಂಧಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ 70 ಹಲ್ಲೆ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ 161 ಜನರನ್ನು ಬಂಧಿಸಲಾಗಿದೆ ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 475 ಜನರು ಕ್ವಾರಂಟೈನ್​ ಆದೇಶ ಉಲ್ಲಂಘಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಸಂಚಾರ ಸಂಬಂಧ ಶನಿವಾರದವರೆಗೆ 803 ಅಪರಾಧ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಈವರೆಗೆ 19,675 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಾಹನ ಮಾಲೀಕರಿಂದ 1.23 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details