ನವದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ಜೋರಾಗಿದೆ ಎಂಬ ಸುದ್ದಿಗಳ ನಡುವೆ ಇಂದು ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
ಒಂದು ವಾರಕ್ಕೆ ಹೋಲಿಕೆ ಮಾಡಿದಾಗ ಇಂದು ದೇಶದಲ್ಲಿ ಸೋಂಕಿತ ಪ್ರಕರಣಗಳು ಕಡಿಮೆಯಾಗಿವೆ. ಕಳೆದ 24 ಗಂಟೆಯಲ್ಲಿ 354 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ದೇಶದಲ್ಲಿ ಸದ್ಯ 4,421 ಜನರು ಮಾರಕ ಸೋಂಕಿನಿಂದ ಬಳಲುತ್ತಿದ್ದು, 326 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ತಿಳಿಸಿದರು.