ಜಾಶ್ಪುರ್/ಸೂರತ್:2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಅತ್ಯಾಚಾರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತ್ಯೇಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು - ಅಪರಾಧ ಸುದ್ದಿ
ಹಲವು ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಮತ್ತೆ ಮತ್ತೆ ಬಳಕಿಗೆ ಬರುತ್ತಿವೆ. ನಿನ್ನೆ ಎರಡು ಪ್ರತ್ಯೇಕ ಪ್ರರಣಗಳಲ್ಲಿ ನಾಲ್ವರು ಆರೋಪಿಗಳನ್ನು ಛತ್ತೀಸ್ಘಡ ಹಾಗೂ ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಛತ್ತೀಸ್ಘಡದ ಪಾಥಲಗಾಂವ್ ಪ್ರದೇಶದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ನವೆಂಬರ್ನಲ್ಲಿ ಘಟನೆ ನಡೆದಿದ್ದು, ಬರ್ತ್ ಡೇ ಪಾರ್ಟಿ ನನೆಪವೊಡ್ಡಿ ಮಹಿಳೆಯನ್ನು ಬರಹೇಳಿ ಆಕೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಗುಜರಾತ್ನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ, ಪೊಲೀಸರು ಓರ್ವ ಅತ್ಯಾಚಾರ ಆರೋಪಿಯನ್ನು ಬಂಧಿಸಿದ್ದಾರೆ. 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೂರತ್ನಲ್ಲಿ ಶಶಿ ಎಂಬಾತನನ್ನು ಬಂಧಿಸಲಾಗಿದೆ.