ಕೃಷ್ಣನಗರ(ಪಶ್ಚಿಮ ಬಂಗಾಳ): ಹೋಳಿ ಹಬ್ಬದ ಸಂಭ್ರಮದಲ್ಲಿ ಬಣ್ಣದಾಟವಾಡಿ ನದಿಗೆ ಸ್ನಾನ ಮಾಡಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಪಶ್ಚಿಮ ಬಂಗಾಳದ ಕೃಷ್ಣ ನಗರದಲ್ಲಿ ನಡೆದಿದೆ.
ಹೋಳಿ ಆಡಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು - ನಾಲ್ವರು ಮಕ್ಕಳು ಸಾವು
ಹೋಳಿ ಹಬ್ಬದ ಬಣ್ಣದಾಟದಲ್ಲಿ ಭಾಗಿಯಾಗಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
4 children drown in pond after playing with colours
9ರಿಂದ 13 ವರ್ಷದೊಳಗಿನ ನಾಲ್ವರು ಮಕ್ಕಳು ಡೋಲ್ ಜಾತ್ರೆಯಲ್ಲಿ ಭಾಗಿಯಾಗಿ ನಂತರ ಸ್ನಾನಕ್ಕಾಗಿ ನದಿಗೆ ತೆರಳಿದ್ದಾರೆ. ಈ ವೇಳೆ ಈಜಲು ಬಾರದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಕ್ಕಳು ನೀರಿನಲ್ಲಿ ಮುಳುಗಿರುವ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಅವರನ್ನ ಹೊರ ತೆಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆದಾಗಲೇ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಸನ್ನಿ ಪ್ರಮಾನಿಕ್, ಆತನ ಸಹೋದರಿ ಸ್ನೇಹಾ, ಸುಭ್ಜಿತ್ ಹಲ್ದಾರ್ ಹಾಗೂ ರಾಕಿ ಹಲ್ದಾರ್ ಮೃತಪಟ್ಟಿರುವ ಮಕ್ಕಳು ಎಂದು ತಿಳಿದು ಬಂದಿದೆ.