ಸುರೇಂದ್ರನಗರ: ಬೆಳ್ಳಂಬೆಳಗ್ಗೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಠಾರಿಯಾ ಗ್ರಾಮದ ಹೆದ್ದಾರಿಯಲ್ಲಿ ಸಂಭವಿಸಿದೆ.
ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ರಸ್ತೆ ಬದಿ ಉರುಳಿ ಬಿದ್ದಿದೆ. ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.
ಮೃತರ ದೇಹಗಳನ್ನು ಕಾರಿನಿಂದ ಹೊರ ತೆಗೆದ ಪೊಲೀಸರು 108 ಆ್ಯಂಬುಲೆನ್ಸ್ ಮೂಲಕ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.