ಪ್ರಯಾಗರಾಜ್ (ಉತ್ತರ ಪ್ರದೇಶ) :ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಭಯಾನಕ ಘಟನೆ ಜಿಲ್ಲೆಯ ನವಾಬ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಮ್ನಾಗ್ರಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಯಾಗ್ರಾಜ್ನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ - Murder in Prayagraj
ಪತಿ, ಪತ್ನಿ ಇಬ್ಬರು ಪುತ್ರಿಯರು ಮತ್ತು ಮೊಮ್ಮಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ನಾಲ್ವರನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆದಿದೆ.
ಪ್ರಯಾಗ್ ರಾಜ್ನಲ್ಲಿ ನಾಲ್ವರ ಹತ್ಯೆ
ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಒಂದೇ ಕುಟುಂಬದ ಪತಿ, ಪತ್ನಿ ಇಬ್ಬರು ಪುತ್ರಿಯರು ಮತ್ತು ಮೊಮ್ಮಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆ ಉಸಿರಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ನಡೆದ ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.