ರಾಯ್ಬರೇಲಿ:ಮಹಾರಾಷ್ಟ್ರದಿಂದ ಉತ್ತರಪ್ರದೇಶದ ಜೌನ್ಪುರ್ಗೆ ಹೋಗುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದ ಪರಿಣಾಮ ತಾಯಿ - ಮಗಳು ಸೇರಿದಂತೆ ನಾಲ್ವರು ಮೃತಪಟ್ಟಿರುವ ಅಮಾನವೀಯ ಘಟನೆ ನಡೆದಿದೆ.
ವಲಸೆ ಕಾರ್ಮಿಕರ ಮೇಲೆ ಹರಿದ ಟ್ರಕ್... ತಾಯಿ-ಮಗಳು ಸೇರಿ ನಾಲ್ವರ ದುರ್ಮರಣ!
ಮಹಾರಾಷ್ಟ್ರದಿಂದ ಮನೆಗೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದಿರುವ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಲಾಕ್ಡೌನ್ ಉಂಟಾದ ಕಾರಣ ಆಟೋ ರಿಕ್ಷಾದಲ್ಲಿ ಬರೋಬ್ಬರಿ 1,300 ಕಿಲೋ ಮೀಟರ್ ಪ್ರಯಾಣ ಬೆಳೆಸುವ ನಿರ್ಧಾರ ಮಾಡಿ ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಬಿಟ್ಟಿದ್ದರು.
ಇಂದು ಬೆಳಗ್ಗೆ ಏಕಾಏಕಿ ಟ್ರಕ್ ಹರಿದ ಕಾರಣ ತಾಯಿ - ಮಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಿಂದ ಪ್ರಯಾಣ ಬೆಳೆಸಿದ್ದವರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 16 ಮಂದಿ ಸಾವನ್ನಪ್ಪಿದ್ದರು. ಇವರೆಲ್ಲರೂ ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಇದರ ಮಧ್ಯೆ ಮಧ್ಯಪ್ರದೇಶದ ಝಾನ್ಸಿಯಿಂದ ಉತ್ತರಪ್ರದೇಶದ ಆಗ್ರಾಗೆ ಟ್ರಕ್ನಲ್ಲಿ ತೆರಳುತ್ತಿದ್ದ ವೇಳೆ ಅದು ಪಲ್ಟಿಯಾಗಿ ಐವರು ಕಾರ್ಮಿಕರು ದುರ್ಮರಣಕ್ಕೀಡಾದ ಘಟನೆ ಸಹ ನಡೆದಿತ್ತು.