ಕರ್ನಾಟಕ

karnataka

ETV Bharat / bharat

ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್​​​ಗೆ ಆ್ಯಂಬುಲೆನ್ಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದುರ್ಮರಣ - ಆಂಬ್ಯುಲೆನ್ಸ್ ಡ್ರೈವರ್​​

ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್​​​ಗೆ ಆ್ಯಂಬುಲೆನ್ಸ್​ ಡಿಕ್ಕಿಯಾದ ಪರಿಣಾಮ ಟ್ರಕ್​​​ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಆ್ಯಂಬುಲೆನ್ಸ್​ ಚಾಲಕನ ನಿಯಂತ್ರಣ ತಪ್ಪಿದ್ದರಿಂದಾಗಿ ರಸ್ತೆ ಬದಿ ನಿಂತಿದ್ದ ಟ್ರಕ್​​​​ಗೆ ಗುದ್ದಿದೆ. ಅಪಘಾತದ ತೀವ್ರತೆಗೆ ಟ್ರಕ್​​​​​​ ನಜ್ಜುಗುಜ್ಜಾಗಿದೆ.

4-of-family-killed-3-injured-as-ambulance-rams-into-stationary-truck-in-bihar
ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್​​​ಗೆ ಆ್ಯಂಬುಲೆನ್ಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದುರ್ಮರಣ

By

Published : Sep 7, 2020, 3:33 PM IST

Updated : Sep 7, 2020, 4:07 PM IST

ನಳಂದ(ಬಿಹಾರ): ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್​ವೊಂದು ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್​​ಗೆ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಳಂದ ಜಿಲ್ಲೆಯ ಗೌರಾ ಪಾರ್​​​ನಲ್ಲಿ ನಡೆದಿದೆ.

ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್​​​ಗೆ ಆ್ಯಂಬುಲೆನ್ಸ್​​ ಡಿಕ್ಕಿಯಾದ ಪರಿಣಾಮ ಟ್ರಕ್​​​ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್​ ಚಾಲಕನ ನಿಯಂತ್ರಣ ತಪ್ಪಿದ್ದರಿಂದಾಗಿ ರಸ್ತೆ ಬದಿ ನಿಂತಿದ್ದ ಟ್ರಕ್​​​​ಗೆ ಗುದ್ದಿದೆ. ಅಪಘಾತದ ತೀವ್ರತೆಗೆ ಟ್ರಕ್​​​​​​ ನಜ್ಜುಗುಜ್ಜಾಗಿದೆ.

ಅಪಘಾತದ ಬಳಿಕ ಆ್ಯಂಬುಲೆನ್ಸ್ ಡ್ರೈವರ್​​ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಠಾಣಾಧಿಕಾರಿ ಪಂಕಜ್​​ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

Last Updated : Sep 7, 2020, 4:07 PM IST

ABOUT THE AUTHOR

...view details