ಶ್ರೀನಗರ:ಪುಲ್ವಾಮಾದ ಲಸ್ಸಿಪೊರಾದಲ್ಲಿ ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಗುಂಡಿಟ್ಟು ಕೊಂದಿದ್ದಾರೆ.
ಪುಲ್ವಾಮಾದಲ್ಲಿ ಯೋಧರ ಗುಂಡಿಗೆ ನಾಲ್ವರು ಉಗ್ರರು ಬಲಿ, ಓರ್ವ ಅಧಿಕಾರಿ ಹುತಾತ್ಮ - ಜಮ್ಮು ಕಾಶ್ಮೀರ
ಯೋಧರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರು ಹತರಾದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಲಸ್ಸಿಪೊರದಲ್ಲಿ ಸೇನಾಪಡೆ ಯೋಧರು ಶೋಧ ಕಾರ್ಯಾಚರಣೆ ನಡೆಸುವಾಗ ಉಗ್ರರು ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದು, ಯೋಧರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರು ಹತರಾದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಇತ ಗುಂಡಿನ ದಾಳಿ ವೇಳೆ ಗಾಯಗೊಂಡಿದ್ದ ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ. ಇನ್ನು ಪೂಂಚ್ ಸೇಕ್ಟರ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಬಾಲಕಿ ಹಾಗೂ ಸಿಆರ್ಪಿಎಫ್ ಅಧಿಕಾರ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಗುಂಡಿನ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಎರಡು ಎಕೆ 47, ಒಂದು ಎಸ್ಎಲ್ಆರ್ ಹಾಗೂ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ.