ಹರ್ದೋಯಿ (ಉತ್ತರ ಪ್ರದೇಶ): ಕೊರೊನಾ ವಿರುದ್ಧದ ಹೋರಾಟದಲ್ಲಿ ಪೌರ ಕಾರ್ಮಿಕರು ರಜೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ನಗರದಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ವೇಳೆ 40 ವರ್ಷದ ಸಿಬ್ಬಂದಿ ಸಾವನ್ನಪ್ಪಿದ ದುರ್ಘಟನೆ ವರದಿಯಾಗಿದೆ.
ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ವೇಳೆ ಪೌರ ಕಾರ್ಮಿಕ ದುರ್ಮರಣ - COVID-19
ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸರ್ಕಾರಿ ಇಲಾಖೆಗಳು ನಿರಂತರವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಉತ್ತರ ಪ್ರದೇಶದಲ್ಲಿ ಸೋಂಕು ನಿವಾರಕ ಸಿಂಪಡಣೆ ವೇಳೆ ಪೌರಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
40-yr-old man on municipality duty dies
ರಾಜೇಶ್ ಕುಮಾರ್ ಎಂಬವರು ಇಲ್ಲಿನ ಲಕ್ಷ್ಮೀ ಪೂರ್ವ ಪ್ರದೇಶದಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡುತ್ತಿದ್ದರು. ಈ ವೇಳೆ ಅವರು ಏಕಾಏಕಿ ಕುಸಿದು ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಿಂದ ನೊಂದ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದು ಪಾಲಿಕೆ ಮುಖಗವಸು ನೀಡದ ಕಾರಣ ಸಾವು ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪರಿಹಾರವಾಗಿ 50 ಲಕ್ಷ ರೂ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.