ನವದೆಹಲಿ:70 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಮತದಾನ ಇನ್ನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಒಟ್ಟು 672 ಅಭ್ಯರ್ಥಿಗಳು ಕಣದಲ್ಲಿದ್ದು, 147 ಲಕ್ಷ ಮತದಾರರು ತಮ್ಮ ನಾಯಕರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಗೆ ಬಿರುಸಿನಿಂದ ಸಾಗಿದ ಮತದಾನ - ದೆಹಲಿ ವಿಧಾನಸಭಾ ಚುನಾವಣೆ ಮತದಾನ
ರಾಷ್ಟ್ರ ರಾಜಧಾನಿ ನವದೆಹಲಿ ವಿಧಾನಸಭಾ ಚುನಾವಣೆ ಕ್ಲೈಮಾಕ್ಸ್ ಹಂತಕ್ಕೆ ಬಂದಿದ್ದು, ಇಂದು ಮತದಾನ ನಡೆಯುತ್ತಿದೆ. ಈ ತಿಂಗಳ 11 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, 147 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 13,750 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಗ್ಗೆ 8 ಗೆ ಆರಂಭವಾಗಿರುವ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.
ಇನ್ನು ವಿಧಾನಸಭಾ ಚುನಾವಣೆ ಸುಗಮವಾಗಿ ನಡೆಯುವುದಕ್ಕೆ ದೆಹಲಿ ಪೊಲೀಸರು ಸಮರ್ಪಕ ವ್ಯವಸ್ಥೆ ಮಾಡಿದ್ದಾರೆ. ಸುಮಾರು 40,000 ಭದ್ರತಾ ಸಿಬ್ಬಂದಿ, 19,000 ಗೃಹರಕ್ಷಕ ದಳ ಸಿಬ್ಬಂದಿ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.